ಪಶ್ಚಿಮ ಬಂಗಾಳ : ಪ್ರತಿಭಟನೆ ನಿರತ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ - Mahanayaka

ಪಶ್ಚಿಮ ಬಂಗಾಳ : ಪ್ರತಿಭಟನೆ ನಿರತ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್

08/10/2020


Provided by

ದಂಕುನಿ: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ದಂಕುನಿಯಲ್ಲಿ ಹೆದ್ದಾರಿ ಬಂದ್​ ಮಾಡಿ ಬೃಹತ್​ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು.ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುವುದನ್ನು ಪ್ರಶ್ನಿಸಿ, ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್​ ಲಾಠಿ ಚಾರ್ಜ್ ಮಾಡಿದರು.


Provided by

ಹೆದ್ದಾರಿಯಲ್ಲಿ ಟ್ರಾಫಿಕ್​ ಜಾಮ್​ ಆಗಿರುವುದರಿಂದ ಪೊಲೀಸರು ಬಿಜೆಪಿ ಕಾರ್ಯಕರ್ತರಲ್ಲಿ ಮೊದಲು ಮನವಿ ಮಾಡಿದ್ದಾರೆ. ಅವರ ಮನವಿಗೆ ಬಿಜೆಪಿ ಕಾರ್ಯಕರ್ತರು ಬಗ್ಗದೆ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಲಾಠಿ ಚಾರ್ಜ್​ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಇತ್ತೀಚಿನ ಸುದ್ದಿ