ಹೋಂ ಐಸೋಲೇಷನ್ ನಲ್ಲಿರುವವರ ಮನೆಗೆ ಸಿ.ಇ.ಒ ಭೇಟಿ - Mahanayaka
10:02 PM Monday 17 - November 2025

ಹೋಂ ಐಸೋಲೇಷನ್ ನಲ್ಲಿರುವವರ ಮನೆಗೆ ಸಿ.ಇ.ಒ ಭೇಟಿ

15/10/2020

ಹಾಸನ: ಹೊಳೆನರಸೀಪುರ ತಾಲ್ಲೂಕಿನ ಹಳೆಕೋಟೆ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಬಿ.ಎ. ಪರಮೇಶ್ ಅವರು ಹೋಂ ಐಸೋಲೇಷನ್ ನಲ್ಲಿರುವ ಕೋವಿಡ್-19 ಸೋಂಕಿತ ವ್ಯಕ್ತಿಯ ಮನೆಗೆ ಖುದ್ದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಹಾಗೂ ಆರೋಗ್ಯ ಇಲಾಖೆ ತಂಡದ ಕಾರ್ಯವೈಖರಿ ಪರಿಶೀಲಿಸಿ, ಇದೇ ರೀತಿಯಲ್ಲಿ ಬೇರೆ ತಾಲ್ಲೂಕುಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ