ಲೋಕಾ ಚುನಾವಣಾ ಕದನ: 1 ಲಕ್ಷ ಆರ್ಥಿಕ ಸಹಾಯದ ಜೊತೆ ಮಹಿಳೆಯರಿಗೆ ಉದ್ಯೋಗದಲ್ಲಿ 50% ಮೀಸಲಾತಿ ಘೋಷಿಸಿದ ಕಾಂಗ್ರೆಸ್ - Mahanayaka

ಲೋಕಾ ಚುನಾವಣಾ ಕದನ: 1 ಲಕ್ಷ ಆರ್ಥಿಕ ಸಹಾಯದ ಜೊತೆ ಮಹಿಳೆಯರಿಗೆ ಉದ್ಯೋಗದಲ್ಲಿ 50% ಮೀಸಲಾತಿ ಘೋಷಿಸಿದ ಕಾಂಗ್ರೆಸ್

13/03/2024


Provided by

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಇದೀಗ ಬಡ ಕುಟುಂಬದ ಮಹಿಳೆಯರಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ಮತ್ತು ಕೇಂದ್ರ ಸರಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50 ಶೇಕಡಾದಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ.
ನಾರಿ ನ್ಯಾಯ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಕಾಂಗ್ರೆಸ್ ಐದು ಭರವಸೆಗಳನ್ನು ನೀಡಿದೆ. ಮಹಾಲಕ್ಷ್ಮಿ, ಆದಿ ಅಬಾದಿ ಪೂರ್ಹಕ್, ಶಕ್ತಿ ಕ ಸಮ್ಮಾನ್ ಅಧಿಕಾರ ಮೈತ್ರಿ ಮತ್ತು ಸಾವಿತ್ರಿಬಾಯಿ ಪುಲೆ ಹಾಸ್ಟೆಲ್ ಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದೆ.

ಮಹಾಲಕ್ಷ್ಮಿ ಯೋಜನೆಯಡಿ ಬಡ ಕುಟುಂಬದ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂಪಾಯಿ ಆರ್ಥಿಕ ಸಹಾಯ, ಆದಿ ಅಬಾದಿ ಪುರ್ ಹಕ್ ಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗುವುದು ಎಂದು ರಾಹುಲ್ ಗಾಂಧಿ ವಿವರಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ