6:21 PM Thursday 23 - October 2025

ಪ್ರಚಾರಕ್ಕಾಗಿ ಯೋಗಿ ಸರ್ಕಾರದಿಂದ ಹಣ ದುರುಪಯೋಗ? ಸಾಮಾಜಿಕ ಜಾಲತಾಣಗಳಲ್ಲಿ ಆರೋಪ

29/10/2024

ಸಂಸ್ಕೃತ ಕಲಿಯುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ವ್ಯಾಪಕ ತಮಾಷೆ ಮತ್ತು ವ್ಯಂಗ್ಯಕ್ಕೆ ಗುರಿಯಾಗಿದ್ದಾರೆ. ಓರ್ವ ವಿದ್ಯಾರ್ಥಿಗೆ 300 ರೂಪಾಯಿಯಿಂದ 900 ರೂಪಾಯಿಯವರೆಗೆ ಈ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಆದರೆ ಮುನ್ನೂರು ರೂಪಾಯಿಯ ಚೆಕ್ ಫಲಕ ನಿರ್ಮಿಸಲು ಮುನ್ನೂರು ರೂಪಾಯಿಗಿಂತಲೂ ಅಧಿಕ ಮೊತ್ತವನ್ನು ಖರ್ಚು ಮಾಡಲಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗಿದೆ.

ಚಿತ್ರಗಳು ವೈರಲಾಗುವುದರೊಂದಿಗೆ ಯೋಗಿ ಆದಿತ್ಯನಾಥ ಸರಕಾರವನ್ನು ಮತ್ತು ಈ ಕಾರ್ಯಕ್ರಮದ ಆಯೋಜಕರನ್ನು ಸೋಶಿಯಲ್ ಮೀಡಿಯಾದಲ್ಲಿ ತರಾಟೆಗೆ ಎತ್ತಿಕೊಳ್ಳಲಾಗಿದೆ. ಸಾರ್ವಜನಿಕರ ಹಣವನ್ನು ಪ್ರಚಾರಕ್ಕಾಗಿ ಯೋಗಿ ಸರಕಾರ ದುರುಪಯೋಗಿಸುತ್ತಿದೆ ಎಂದು ಅನೇಕರು ಟೀಕಿಸಿದ್ದಾರೆ. 300 ರೂಪಾಯಿಯ ಚೆಕ್ ಕೊಡಲು ನಾಲ್ಕು ಮಂದಿ ಫಲಕಕ್ಕೆ ಕೈಜೋಡಿಸಿದ್ದಾರೆ ಎಂದು ಕೂಡ ಅನೇಕರು ಬೊಟ್ಟು ಮಾಡಿದ್ದಾರೆ.

ಒಟ್ಟು 69,195 ವಿದ್ಯಾರ್ಥಿಗಳಿಗೆ ಈ ಸ್ಕಾಲರ್ ಶಿಪ್ ಅನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version