4:02 PM Thursday 15 - January 2026

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಕ್ಕೆ ಸಿಎಂ ಯಡಿಯೂರಪ್ಪ ಆದೇಶ

21/10/2020

ಬೆಂಗಳೂರು: ರಾಜ್ಯ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಕರ ವರ್ಗಾವಣೆಯ ವೇಳಾ ಪಟ್ಟಿಯನ್ನು ಹೊರಡಿಸದ ಹಿನ್ನೆಲೆಯಲ್ಲಿ  ಶಿಕ್ಷಕರು ಆತಂಕದಲ್ಲಿದ್ದಾರೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.

ಇಂದಿನಿಂದ ಒಂದು ವಾರದೊಳಗಾಗಿ ಶಿಕ್ಷಣ ಇಲಾಖೆಯು ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸರ್ಕಾರ ಆದೇಶಿಸಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.

ಬೇರೆ ಇಲಾಖೆಗಳಲ್ಲಿ ಕಾಲ ಕಾಲಕ್ಕೆ ವರ್ಗಾವಣೆಯಾಗುತ್ತಿದೆ. ಆದರೆ ಶಿಕ್ಷಣ ಇಲಾಖೆಯ ನೌಕರರಿಗೆ ತಾರತಮ್ಯ ಎಸಗಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದ ಮನವಿಯಲ್ಲಿ ತಿಳಿಸಿತ್ತು.

ಇತ್ತೀಚಿನ ಸುದ್ದಿ

Exit mobile version