ಪಶ್ಚಿಮ ಬಂಗಾಳದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಏಳು ಮಂದಿ ಸಾವು; ಓರ್ವನ ಬಂಧನ
28/08/2023
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಫೀಕ್ ಅಲಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ನೀಲಗಂಜ್ ಪ್ರದೇಶದಿಂದ ಆರೋಪಿಯನ್ನು ಬಂಧಿಸಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಭಾನುವಾರ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರ್ಖಾನೆಯ ಮಾಲೀಕ ಕೆರಮತ್ ಅಲಿ ಅವರ ಸಹಭಾಗಿತ್ವದಲ್ಲಿ ಅಲಿ ಅಕ್ರಮ ಪಟಾಕಿಗಳ ವ್ಯವಹಾರವನ್ನು ನಡೆಸುತ್ತಿದ್ದರು ಎಂದು ವರದಿಯಾಗಿದೆ. ಸ್ಫೋಟದ ಪರಿಣಾಮವು ಎಷ್ಟು ತೀವ್ರವಾಗಿತ್ತೆಂದರೆ, ನೆರೆಹೊರೆಯ 50 ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಲವಾರು ಕಟ್ಟಡಗಳ ಟೆರೇಸ್ಗಳಲ್ಲಿ ಜನರ ದೇಹದ ಭಾಗಗಳು ಕಂಡುಬಂದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.




























