ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ: ಓರ್ವ ಸಾವು

22/03/2024
ಬಿಹಾರದ ಸುಪಾಲ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಹಲವಾರು ಮಂದಿ ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಕೋಸಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ನಿರ್ಮಾಣ ಹಂತದ ಸೇತುವೆಯ ಸ್ಲ್ಯಾಬ್ ಕುಸಿದಾಗ ಈ ಘಟನೆ ಸಂಭವಿಸಿದೆ. ಓರ್ವ ವ್ಯಕ್ತಿಯ ಸಾವು ಮತ್ತು ಹಲವಾರು ಮಂದಿಗೆ ಆಗಿರುವ ಗಾಯಗಳನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth