10:18 PM Saturday 23 - August 2025

ರಾಜಸ್ಥಾನದಲ್ಲಿ ಅನೈತಿಕ ಪೊಲೀಸ್ ಗಿರಿ: ಓರ್ವ ಸಾವು, ಇಬ್ಬರಿಗೆ ಗಾಯ

19/08/2023

ರಾಜಸ್ಥಾನದ ಅಲ್ವಾರ್ ನಲ್ಲಿ ಅನೈತಿಕ ಪೊಲೀಸ್ ಗಿರಿ‌ ನಡೆಸಿದ ಪ್ರಕರಣ ವರದಿಯಾಗಿದೆ.‌ ಇದರಲ್ಲಿ ಗುಂಪೊಂದು ನಡೆಸಿದ ದಾಳಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಆರೋಪಿಗಳು ಅಲ್ವಾರ್ ನ ನರೋಲ್ ಗ್ರಾಮದ ಬಳಿ ಯುವತಿ ಇದ್ದ ಕಾರನ್ನು ನಿಲ್ಲಿಸಿ ಒಳಗೆ ಕುಳಿತಿದ್ದ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ.

ಕಾರಿನಲ್ಲಿದ್ದ ಮೂವರೂ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೋಟ್ಪುಟ್ಲಿ ಬಿಡಿಎಂ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರಲ್ಲಿ ಓರ್ವ ವ್ಯಕ್ತಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಹರ್ಸೌರಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿದ್ದು ಇಲ್ಲಿಯವರೆಗೆ ನಾಲ್ಕು ಜನರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ..

ಇತ್ತೀಚಿನ ಸುದ್ದಿ

Exit mobile version