ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ - Mahanayaka

ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ

jallil familly
20/01/2023

ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಮಂಗಳೂರಲ್ಲಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ.ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು.

ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್ ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆರೋಪಿಸಿದರು. ಮುಂದೆ ನಮ್ಮ ಸರ್ಕಾರ ಬರಲಿದೆ ಇಂತಹಾ ಅಮಾನುಷ ಹತ್ಯೆಗಳನ್ನು ನಮ್ಮ ಸರ್ಕಾರ ಇತಿಶ್ರೀ ಹಾಕಲಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಮಾತಾಡಿದ ಜಲೀಲ್ ತಂದೆ ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಮೊಯಿದೀನ್ ಬಾವಾ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ ಸಿ ಎಸ್ ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಅಬೂಬಕರ್ ಪ್ಯಾರಡೈಸ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ