ಭೀಕರ ಅಪಘಾತ: ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ 10 ಭಕ್ತರು ಸಾವು, 19 ಜನರಿಗೆ ಗಾಯ

ಪ್ರಯಾಗ್ ರಾಜ್: ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ ಹಾಗೂ ಬುಲೆರೊ ವಾಹನ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ 10 ಜನ ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ—ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಲ್ಲಿ 19 ಜನರಿಗೆ ಗಾಯಗಳಾಗಿದ್ದು, ಮೃತರು ಛತ್ತೀಸ್ ಗಡದ ಕೊರ್ಬಾ ಜಿಲ್ಲೆ ಮೂಲದವರು ಎಂದು ಹೇಳಲಾಗಿದೆ. ಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಈ ದುರ್ಘಟನೆ ನಡೆದಿದೆ.
ಬೊಲೆರೊ ವಾಹನದಲ್ಲಿ ಭಕ್ತರು ಪ್ರಯಾಣಿಸುತ್ತಿದ್ದರು. ಇದೇ ವೇಳೆ ರಾಜ್ ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್ ಗೆ ಬೊಲೆರೊ ಡಿಕ್ಕಿ ಹೊಡೆದಿದೆ.
ಅಪಘಾತದ ಮಾಹಿತಿ ಪಡೆದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: