ಕೆಫೆ ಸ್ಫೋಟ ಪ್ರಕರಣ: ಬಾಂಬರ್ ನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರ ತಂಡ ತೀವ್ರ ಶೋಧ ನಡೆಸುತ್ತಿದೆ.
ಬಾಂಬ್ ಸ್ಫೋಟದ ತನಿಖೆಯನ್ನು NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್ ಫೋಟೋ ಬಿಡುಗಡೆ ಮಾಡಿದೆ. ಶಂಕಿತ ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಸಿಸಿಬಿ ತನಿಖೆ ವೇಳೆ ಬಾಂಬರ್ ಮಾಸ್ಕ್ ಧರಿಸದ ಫೋಟೋ ಪತ್ತೆಯಾಗಿದ್ದು, ಇದೀಗ ಆ ಫೋಟೋವನ್ನು ಎನ್ ಐಎ ಬಿಡುಗಡೆ ಮಾಡಿದೆ. ಆರೋಪಿಯ ಬಗ್ಗೆ ಮಾಹಿತಿ ನೀಡಲು 080-29510900, 8904241100 ಸಂಖ್ಯೆಗೆ ಕರೆಮಾಡುವಂತೆ ಸಾರ್ವಜನಿಕರಿಗೆ ಎನ್ ಐಎ ಮನವಿ ಮಾಡಿದೆ.
ಇನ್ನು ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದೆಂದು ಎನ್ ಐಎ ಸ್ಪಷ್ಟಪಡಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth