10 ರೂಪಾಯಿ ನೀಡುವ ಆಮಿಷವೊಡ್ಡಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್ - Mahanayaka
8:53 PM Thursday 18 - September 2025

10 ರೂಪಾಯಿ ನೀಡುವ ಆಮಿಷವೊಡ್ಡಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್

nippani police
22/08/2024

ಚಿಕ್ಕೋಡಿ: 10 ರೂಪಾಯಿ ಹಣ ನೀಡುವ ಆಮಿಷವೊಡ್ಡಿದ ವೃದ್ಧನೊಬ್ಬ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಎಸಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.

ಆಸಿಫ್ ಭಾಗವಾನ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ನಿಪ್ಪಾಣಿಯ ಬಾದಲ್‌ ಪ್ಲಾಟ್‌ನಲ್ಲಿ ಈ ಘಟನೆ ನಡೆದಿದೆ. 10 ವರ್ಷ ವಯಸ್ಸಿನ ಬಾಲಕಿಗೆ 10 ರೂಪಾಯಿ ಕೊಡುವುದಾಗಿ ಆಮಿಷವೊಡ್ಡಿ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಘಟನೆಯ ಬಳಿಕ ನೊಂದ ಬಾಲಕಿ ತನ್ನ ಪಾಲಕರ ಬಳಿ ಈ ವಿಚಾರ ತಿಳಿಸಿದ್ದಾಳೆ. ಈ ವೇಳೆ ಕೋಪಗೊಂಡ ಪಾಲಕರು ಕಾಮುಕನಿಗೆ ಥಳಿಸಿದ್ದು,  ಬುಧವಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಆ.16ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ನಿಪ್ಪಾಣಿ ಶಹರ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ