10:11 PM Thursday 16 - October 2025

10 ಸಾವಿರಗಳವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ

08/01/2021

ಹಾಸನ:  ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಳಕೆಯಾಗದ ಅನುದಾನದಡಿ 2020-21ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಲು ಬ್ಯಾಂಕ್‍ ಗಳಿಂದ ಸಾಲ ಮತ್ತು ನಿಗಮದಿಂದ ಸಹಾಯಧನ ನೀಡಲಾಗುವುದು.

ಪ್ರತಿ ತಾಲ್ಲೂಕಿಗೆ 1 ಗುರಿ ಮಾತ್ರ ನಿಗದಿಯಾಗಿರುತ್ತದೆ. ಮತ್ತು ಸಮೃದ್ಧಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದಿರುವ 18 ರಿಂದ 60 ವರ್ಷದೊಳಗಿನ ಮಹಿಳಾ ಬೀದಿಬದಿ ವ್ಯಾಪಾರಸ್ಥರಿಗೆ ರೂ 10,000/- ಪ್ರೋತ್ಸಾಹಧನ ನೀಡಲಾಗುವುದು. ಪ್ರತಿ ತಾಲ್ಲೂಕಿಗೆ ಎಸ್.ಸಿ 4 ಎಸ್.ಟಿ 9 ಗುರಿ ನಿಗಧಿಯಾಗಿರುತ್ತದೆ

ಎರಡೂ ಯೋಜನೆಗಳಡಿ ಪ.ಜಾತಿ & ಪ.ಪಂಗಡದ ಮಹಿಳೆಯರಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.16 ಕೊನೆಯ ದಿನಾಂಕ ವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version