ಬಿಜೆಪಿ ಮತ್ತು ಜೆಡಿಎಸ್ ನ 10ರಿಂದ 15 ಮಂದಿ ಹಾಲಿ, ಮಾಜಿ ಸಚಿವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ: ಸಚಿವ ಚೆಲುವರಾಯಸ್ವಾಮಿ

cheluvaraya swami
18/08/2023

ಮೈಸೂರು: ಬಿಜೆಪಿ ಮತ್ತು ಜೆಡಿಎಸ್ ನಿಂದ 10ರಿಂದ 15 ಮಂದಿ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ, ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಮೈಸೂರಿಗೆ ಇಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು.

ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ 10ರಿಂದ 15 ಮಂದಿ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಈ ಬಗ್ಗೆ ಮಾತುಕತೆ ಕೂಡ ನಡೆಯುತ್ತಿದೆ. ಆದ್ರೆ ಸದ್ಯಕ್ಕೆ ಅವರ ಹೆಸರು ಹೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ರು.

ಇತ್ತೀಚಿನ ಸುದ್ದಿ

Exit mobile version