11:19 AM Saturday 15 - August 2026

ಸಿಡಿ ಬಿಡುಗಡೆ ಮಾಡಿದ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ | ಬಾಲಚಂದ್ರ ಜಾರಕಿಹೊಳಿ

03/03/2021

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ರಮೇಶ್ ಜಾರಕಿಹೊಳಿ ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಅಶ್ಲೀಲ ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಇದೊಂದು ನಕಲಿ ಸಿಡಿಯಾಗಿದೆ. ಇದರ ಹಿಂದೆ ಪ್ರಭಾವಿಗಳ ಕೈವಾಡವಿದೆ ಎಂದು ಹೇಳಿದ್ದಾರೆ.

ಈ ರೀತಿಯ ಸಿಡಿಗಳನ್ನು ಗಂಭೀರವಾಗಿ ನಾವು ಪರಿಗಣಿಸುತ್ತಾ ಹೋದರೆ, ರಾಜಕಾರಣ ಮಾಡುವುದೇ ಕಷ್ಟವಾಗುತ್ತದೆ. ಜಾರಕಿಹೊಳಿ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಈ ಘಟನೆಯ ಸತ್ಯಾಸತ್ಯತೆಯ ಬಗ್ಗೆ ಸಿಬಿಐ ತನಿಖೆ ನಡೆಸಲು ಸಿಎಂಗೆ ಮನವಿ ಮಾಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version