ನೂರು ಜನ ಸಿದ್ದರಾಮಯ್ಯ ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ: ಕುಮಾರಸ್ವಾಮಿ - Mahanayaka

ನೂರು ಜನ ಸಿದ್ದರಾಮಯ್ಯ ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ: ಕುಮಾರಸ್ವಾಮಿ

h d kumaraswamy
21/08/2024

ಬೆಂಗಳೂರು: ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನ ಬಂಧನ ಮಾಡ್ತೇವೆ ಅನ್ನೋ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ವಿರುದ್ಧ ಕಿಡಿಕಾರಿದ ಹೆಚ್ ಡಿಕೆ, ನನ್ನ ಬಂಧನ ಮಾಡೋಕೆ ನೂರು ಜನ ಸಿದ್ದರಾಮಯ್ಯ ಬಂದರೂ ಆಗೋದಿಲ್ಲ ಎಂದರು.

ನನಗೆ ಭಯ ಶುರುವಾಗಿದೆ ಅಂತ ಸಿಎಂ ಹೇಳ್ತಾರೆ. ನನಗೆ ಭಯ ಶುರುವಾಗಿದೆಯಾ? ನನ್ನನ್ನ ನೋಡಿದ್ರೆ ಹಾಗೆ ಅನ್ನಿಸುತ್ತಾ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರು ಒಂದು ವಾರದಿಂದ ಹೇಗೆ ನಡೆದುಕೊಂಡಿದ್ದಾರೆ ಅಂತ ಜನ ನೋಡಿದ್ದಾರೆ ಎಂದರು.

ಮುಡಾ ಆಸ್ತಿ ನನ್ನ ಆಸ್ತಿ ಅಂತ ಹೇಳ್ತಿದ್ದಾರೆ. ಇಂತಹ ಭಂಡತನ ಮುಖ್ಯಮಂತ್ರಿ ನಾನು ನೋಡಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ