ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1000 ಕೋಟಿ ಮೀಸಲಿಟ್ಟಿದ್ದಾರೆ: ಯತ್ನಾಳ್ ಆರೋಪ
ದಾವಣಗೆರೆ: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಕೆಡವಿ, ತಾವು ಸಿಎಂ ಆಗಬೇಕೆಂದು ಬಿಜೆಪಿಯ ನಾಯಕರೊಬ್ಬರು ಒಂದು ಸಾವಿರ ಕೋಟಿ ರೂ. ರೆಡಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಹೇಳದೆ ಟಾಂಗ್ ನೀಡಿದರು.
ಈ ಹಿಂದೆ, ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಹೈಕಮಾಂಡ್ ಗೆ ಯಾರು ಎರಡೂವರೆ ಸಾವಿರ ಕೋಟಿ ರೂ. ಕೊಡುತ್ತಾರೋ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯುತ್ತದೆ ಎಂದು ಹೇಳುವ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದರು.
ಈಗ, ಬಿಜೆಪಿ ನಾಯಕರೊಬ್ಬರು ಸಿಎಂ ಆಗಲು 1000 ಕೋಟಿ ರೂ. ಕೂಡಿಟ್ಟುಕೊಂಡಿದ್ದಾರೆ ಎಂದು ಹೇಳುವ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಆದರೆ, ಸಾವಿರ ಕೋಟಿ ರೂ. ಕೂಡಿಟ್ಟುಕೊಂಡಿರುವ ಬಿಜೆಪಿ ನಾಯಕ ಯಾರು ಎಂಬುದನ್ನು ಬಹಿರಂಗಪಡಿಲಿಲ್ಲ.
ಕಾಂಗ್ರೆಸ್ ಸರ್ಕಾರವನ್ನು ಕೆಡವಲು ನಮ್ಮ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ.ಆದರೆ, ಸರ್ಕಾರ ಅಸ್ಥಿರಗೊಳಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಅವರು ಮುಖ್ಯಮಂತ್ರಿಯಾಗಲು ನಾವು ಬೆಂಬಲ ಕೊಡಬೇಕಲ್ಲವೇ?. ಕಳೆದ ಬಾರಿಯಂತೆ ಎಲ್ಲಾ ಶಾಸಕರು ಆ ನಾಯಕತ್ವಕ್ಕೆ ಮನ್ನಣೆ ಕೊಡುವುದಿಲ್ಲ. ಸರ್ಕಾರ ರಚನೆ ಅವರು ಅಂದುಕೊಂಡಷ್ಟು ಸರಳವಾಗಿಲ್ಲ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: