108 ಆ್ಯಂಬುಲೆನ್ಸ್ ಸರ್ವೀಸ್ ಇನ್ನು ಮುಂದೆ ಸರ್ಕಾರವೇ ನೀಡಲಿದೆ: ಸಚಿವ ದಿನೇಶ್ ಗುಂಡೂರಾವ್ - Mahanayaka

108 ಆ್ಯಂಬುಲೆನ್ಸ್ ಸರ್ವೀಸ್ ಇನ್ನು ಮುಂದೆ ಸರ್ಕಾರವೇ ನೀಡಲಿದೆ: ಸಚಿವ ದಿನೇಶ್ ಗುಂಡೂರಾವ್

108
14/05/2025


Provided by

ಬೆಂಗಳೂರು: ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವೀಸ್ ನೀಡಲಿದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ ಎಂದು ಹೇಳಿದ್ದಾರೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.

30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 2023–24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೆರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ