ಕಲಬುರಗಿಯಲ್ಲಿ 109 ನಕಲಿ ವೈದ್ಯರು ಪತ್ತೆ: 43 ಕ್ಲಿನಿಕ್​ ಗಳಿಗೆ ಬೀಗ ಹಾಕಿದ ಅಧಿಕಾರಿಗಳು - Mahanayaka

ಕಲಬುರಗಿಯಲ್ಲಿ 109 ನಕಲಿ ವೈದ್ಯರು ಪತ್ತೆ: 43 ಕ್ಲಿನಿಕ್​ ಗಳಿಗೆ ಬೀಗ ಹಾಕಿದ ಅಧಿಕಾರಿಗಳು

kalaburagi
03/02/2024


Provided by

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಜಾಲ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.

ಕಲಬುರಗಿ ಜಿಲ್ಲೆಯ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು,  KPME ಅನುಮತಿ ಪಡೆಯದೆ,  ಜನರಿಗೆ ರಾಜಾರೋಷವಾಗಿ ಚಿಕಿತ್ಸೆ ನೀಡುತ್ತಿದ್ದು, ಅಮಾಯಕರ  ಜೀವದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತವಾದ ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.

ಸದ್ಯ  109 ನಕಲಿ ವೈದ್ಯರನ್ನು ಪತ್ತೆ ಮಾಡಿ, 43 ಕ್ಲಿನಿಕ್​ ಗಳಿಗೆ ಬೀಗ ಜಡಿಯಲಾಗಿದೆ.  KPME ಅನುಮತಿ ಪಡೆಯದೆ ಚಿಕಿತ್ಸೆ ನೀಡುತ್ತಿರುವ ಕ್ಲಿನಿಕ್ ​ಗಳಿಗೆ ನೋಟಿಸ್ ನೀಡಿದ ಮೇಲೂ ಅನುಮತಿ ಪಡೆಯದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ಕೂಡ ‌ ನೀಡಲಾಗಿದೆ.

ಇತ್ತೀಚಿನ ಸುದ್ದಿ