ಕಲಬುರಗಿಯಲ್ಲಿ 109 ನಕಲಿ ವೈದ್ಯರು ಪತ್ತೆ: 43 ಕ್ಲಿನಿಕ್ ಗಳಿಗೆ ಬೀಗ ಹಾಕಿದ ಅಧಿಕಾರಿಗಳು

03/02/2024
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಜಾಲ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.
ಕಲಬುರಗಿ ಜಿಲ್ಲೆಯ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, KPME ಅನುಮತಿ ಪಡೆಯದೆ, ಜನರಿಗೆ ರಾಜಾರೋಷವಾಗಿ ಚಿಕಿತ್ಸೆ ನೀಡುತ್ತಿದ್ದು, ಅಮಾಯಕರ ಜೀವದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತವಾದ ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.
ಸದ್ಯ 109 ನಕಲಿ ವೈದ್ಯರನ್ನು ಪತ್ತೆ ಮಾಡಿ, 43 ಕ್ಲಿನಿಕ್ ಗಳಿಗೆ ಬೀಗ ಜಡಿಯಲಾಗಿದೆ. KPME ಅನುಮತಿ ಪಡೆಯದೆ ಚಿಕಿತ್ಸೆ ನೀಡುತ್ತಿರುವ ಕ್ಲಿನಿಕ್ ಗಳಿಗೆ ನೋಟಿಸ್ ನೀಡಿದ ಮೇಲೂ ಅನುಮತಿ ಪಡೆಯದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ಕೂಡ ನೀಡಲಾಗಿದೆ.