10ನೇ ತರಗತಿ- ಐಟಿಐ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆ ಉದ್ಯೋಗ | ಪರೀಕ್ಷೆ ಇಲ್ಲದೇ ನೇರ ನೇಮಕಾತಿ

17/06/2021
ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಪರೀಕ್ಷೆ ನಡೆಸದೇ ನೇರ ನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ವರ್ಗದವರಿಗೆ 100 ರೂ. ಅರ್ಜಿ ಶುಲ್ಕವಿದ್ದು, ಜೂನ್ 24 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ https://www.rrc-wr.com ಸಂಪರ್ಕಿಸಬಹುದಾಗಿದೆ.