ಬಸ್ ಗೆ ಡಿಕ್ಕಿ ಹೊಡೆದ ಎಸ್’ಯುವಿ ಕಾರು: 11 ಜನ ಸ್ಥಳದಲ್ಲೇ ಸಾವು

betul
04/11/2022

ಬೇತುಲ್ :  ಬಸ್‌ ಗೆ SUV ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಜಲ್ಲಾರ್ ನಲ್ಲಿ ನಡೆದಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 36 ಕಿ.ಮೀ. ದೂರದಲ್ಲಿರುವ ಭೈನ್ಸ್‌ ದೇಹಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಬೇತುಲ್ ಪೊಲೀಸರು ತಿಳಿಸಿದ್ದಾರೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ  ಈ ಅಪಘಾತ ನಡೆದಿದ್ದು, ಆರು ಪುರುಷರು, ಮೂವರು ಮಹಿಳೆಯರು ಮತ್ತು ಐದು ವರ್ಷದ ಬಾಲಕಿ ಮತ್ತು ಅಂಬೆಗಾಲಿಡುವ ಮಗು ಅಪಘಾತದಲ್ಲಿ ಬಲಿಯಾದವರಾಗಿದ್ದಾರೆ.

ಮೃತರು ಕಾರ್ಮಿಕರಾಗಿದ್ದು ಅವರು ನೆರೆಯ ಮಹಾರಾಷ್ಟ್ರದ ಅಮರಾವತಿಯಿಂದ ತಮ್ಮೂರಿಗೆ ವಾಪಸಾಗುತ್ತಿದ್ದರು. ಎಸ್ ಯುವಿ ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಿಸಿರುವುದು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version