ಭೂಷಣ್ ಪ್ರಶಸ್ತಿ ಪ್ರದಾನ ವೇಳೆ ಬಿಸಿಲಿನ ತಾಪಕ್ಕೆ 11 ಮಂದಿ ಬಲಿ: ಹಲವರ ಸ್ಥಿತಿ ಚಿಂತಾಜನಕ

ಮಹಾರಾಷ್ಟ: ಮುಂಬೈನ ಖಾರ್ಘರ್ ನಲ್ಲಿ ನಡೆದ ಭೂಷಣ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಬಲಿಯಾಗಿದ್ದು, 24 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಭಾನುವಾರ ಬೆಳಗ್ಗೆ 11:30 ರಿಂದ ಕಾರ್ಯಕ್ರಮ ಆರಂಭವಾಗಿದ್ದು, ಮಧ್ಯಾಹ್ನ 1ರವರೆಗೆ ನಡೆದಿತ್ತು. ಸಭೆಯಲ್ಲಿ ಸಾವಿರಾರು ಜನರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಜನರ ಆರೋಗ್ಯ ಹದಗೆಟ್ಟಿದೆ. ಶಾಖದ ಹೊಡೆತದಿಂದ ಎಲ್ಲರೂ ಏಕಾಏಕಿ ತೀವ್ರ ಅಸ್ವಸ್ಥರಾಗಿದ್ದಾರೆ. ತಕ್ಷಣ ಹೀಟ್ ಸ್ಟ್ರೋಕ್ ನಿಂದ ಬಳಲುತ್ತಿರುವವರನ್ನು ಖಾರ್ಘರ್ ನ ಟಾಟಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಸೂಕ್ತ ಸೌಲಭ್ಯ ಕಲ್ಪಿಸುದಾಗಿ ತಿಳಿಸಿದ್ದು, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಸ್ಥಾಪಿಸಿದ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಗೃಹ ಸಚಿವ ಅಮಿತ್ ಶಾ ಪ್ರದಾನ ಮಾಡಿದರು. ಹೀಗಾಗಿ ಸ್ಥಳದಲ್ಲಿ ಅಧಿಕ ಸಂಖ್ಯೆಯಲ್ಲಿ ಜನ ನೆರೆದಿದ್ದರು. ಭಾನುವಾರ ದಿನದ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶಿಂಧೆ ಮತ್ತು ಫಡ್ನವಿಸ್ ಸಹ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw