ಕೆಎಫ್ ಡಿ ಕಾಯಿಲೆಗೆ 11 ವರ್ಷದ ಬಾಲಕ ಸಾವು

27/07/2025
ಕಾರವಾರ: ಕೆಎಫ್ ಡಿ(ಮಂಗನ ಕಾಯಿಲೆ)ಗೆ 11 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ನಡೆದಿದೆ.
ಆರವ್(11) ಮೃತಪಟ್ಟ ಬಾಲಕನಾಗಿದ್ದಾನೆ. ಏಪ್ರಿಲ್ ನಲ್ಲಿ ಆರವ್ ಗೆ ಕೆಎಫ್ ಡಿ ಕಾಯಿಲೆ ಇರುವುದು ದೃಢಪಟ್ಟಿತ್ತು. ಬಾಲಕನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್ ಮತ್ತು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸತತ ಪ್ರಯತ್ನಗಳ ನಂತರವೂ ಬಾಲಕ ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದಾನೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ 9 ಮಂಗನ ಕಾಯಿಲೆ ಪ್ರಕರಣ ದೃಢಪಟ್ಟಿದ್ದು, ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD