11 ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಬರ್ಬರ ಹತ್ಯೆ!

ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ 11 ವರ್ಷದ ಬಾಲಕಿಯ ಮೇಲೆ ಕಾರು ಚಾಲಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಸಿಕ್ಕಿಂನ ಗ್ಯಾಂಗ್ ಟಾಕ್ ನಲ್ಲಿ ನಡೆದಿದೆ.
ಬಾಲಕಿಯು ಶಾಲೆಯಿಂದ ನಡೆದುಕೊಂಡು ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ಕಾರ್ ನೊಳಗೆ ಹತ್ತಿಸಿಕೊಂಡಿದ್ದು, ನಂತರ ಪೆಟ್ರೋಲ್ ಬಂಕ್ ಬಳಿ ಹಣ್ಣು ಜ್ಯೂಸ್ ಖರೀದಿಸಿದ್ದು ಕಾರ್ ನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಿದ್ದಾನೆ.
ಬಾಲಕಿ ಕಾಣೆಯಾದ ಮೂರನೆ ದಿನಕ್ಕೆ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. “ನನ್ನ ಮಗಳನ್ನುಕೊಂದ ಪಾಪಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಮಗಳು ಸಾಯುವ ಮುನ್ನ ಚಿತ್ರಹಿಂಸೆ ಕೊಟ್ಟು ಕೊಂದಿದ್ದಾನೆ. ಆರೋಪಿಯನ್ನುಅದೇ ರೀತಿ ಚಿತ್ರೆಹಿಂಸೆ ಕೊಟ್ಟುಕೊಲ್ಲಬೇಕೆಂದು’’ ಬಾಲಕಿಯ ತಾಯಿ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw