ಉಳ್ಳಾಲ ಓವರ್ ಬ್ರಿಡ್ಜ್ ಬಳಿ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಧ್ವಜಾರೋಹಣ

ullala
15/08/2022

ಮಂಗಳೂರು: ನಗರದ ಉಳ್ಳಾಲ ಸಮೀಪದ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು.

ಶಾಸಕ ಯು.ಟಿ. ಖಾದರ್ ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮದ ಪ್ರಯುಕ್ತ ಉಳ್ಳಾಲದಿಂದ ಓವರ್ ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು.

YouTube video player

ಈ ಕಾರ್ಯಕ್ರಮದಲ್ಲಿ ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷ ಚಿತ್ರಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಪೌರಾಯುಕ್ತ ವಿದ್ಯಾ ಕಾಳೆ, ತಹಶೀಲ್ದಾರ್ ಗುರುಪ್ರಸಾದ್,  ಗ್ರಾಮಕರಣಿಕ ಪ್ರಮೋದ್, ವಿಧಾನ ಪರಿಷತ್ ಸದಸ್ಯ ಬಿಎಂ ಫಾರೂಕ್, ಚಂದ್ರ ಹಾಸ್ ಪಂಡಿತ್ ಹೌಸ್, ಸಂತೋಷ್ ಬೋಳಿಯಾರ್, ಸತೀಶ್ ಕುಂಪಲ, ಪುರುಷೋತ್ತಮ ಕಲ್ಲಾಪು, ಸದಾಶಿವ ಉಳ್ಳಾಲ್, ಬಾಜಿಲ್ ಡಿಸೋಜ, ವಿವಿಧ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ನಗರ ಸಭೆಯ ಕೌನ್ಸಿಲರ್ ಗಳು, ವಿವಿಧ ಸಂಘಟನೆಗಳ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಅಧ್ಯಾಪಕರು, ಸ್ಥಳೀಯರು ಉಪಸ್ಥಿತರಿದ್ದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version