12.5 ಕೋಟಿ ರೂ. ಲಂಚ ಪಡೆದ ಆರೋಪ | ಸಿಎಂ ಯಡಿಯೂರಪ್ಪ ಸಹಿತ ಹಲವರ ಭವಿಷ್ಯ ಇಂದು ನಿರ್ಧಾರ - Mahanayaka
5:01 AM Wednesday 15 - October 2025

12.5 ಕೋಟಿ ರೂ. ಲಂಚ ಪಡೆದ ಆರೋಪ | ಸಿಎಂ ಯಡಿಯೂರಪ್ಪ ಸಹಿತ ಹಲವರ ಭವಿಷ್ಯ ಇಂದು ನಿರ್ಧಾರ

yediyurappa
08/07/2021

ಬೆಂಗಳೂರು: ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ಬಳಿ 12.5 ಕೋಟಿ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಮತ್ತು ಇತರರ ವಿರುದ್ಧ ಸಾಮಾಜಿಕ ಹೋರಾಟಗಾರ ಅಬ್ರಹಾಂ ದೂರು ನೀಡಿದ್ದು, ಈ ದೂರನ್ನು ಅಂಗೀಕರಿಸುವ ಬಗ್ಗೆ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಪ್ರಕಟಿಸಲಿದೆ.


Provided by

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಯಡಿಯೂರಪ್ಪ ಹಾಗೂ ಮತ್ತಿತರರ ವಿರುದ್ಧ ಕ್ರಮ ಜರಗಿಸುವಂತೆ ಕೋರಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕೇ, ಬೇಡವೇ? ಎಂಬ ಬಗ್ಗೆ  ಜೂನ್ 30ರಂದು ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಧೀಶ ಬಿ.ಜಯಂತ್ ಕುಮಾರ್, ಆದೇಶ ಕಾಯ್ದಿರಿಸಿದ್ದರು.

ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಮತ್ತು ಅವರ ಮೊಮ್ಮಗ ಶಶಿಧರ, ಅಳಿಯ ಸಂಜಯ್, ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಮೈಸೂರು ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್, 37 ಕ್ರೆಸೆಂಟ್ ಹೊಟೇಲ್ ಮಾಲಿಕ ಕೆ.ರವಿ ಮತ್ತು ವಿರೂಪಾಕ್ಷಪ್ಪ ಯಮಕನಮರಡಿ ಅವರನ್ನು ಆರೋಪಿಗಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ