ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಸಾವು

ಚಾಮರಾಜನಗರ: ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಮೃತಪಟ್ಟಿರುವ ಧಾರುಣ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಡಹಳ್ಳಿ ಗ್ರಾಮದ ವಿದ್ಯಾ(12) ಮೃತ ದುರ್ದೈವಿ. ಮನೆಯಲ್ಲಿದ್ದ ನೀರಿನ ಪಂಪ್ ಸ್ವಿಚ್ ಆಫ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಪ್ರವಹಿಸಿದೆ ಎಂದು ತಿಳಿದುಬಂದಿದೆ. ಒದ್ದೆ ಬಟ್ಟೆ ಧರಿಸಿದ್ದರಿಂದ ವಿದ್ಯುತ್ ಶಾಕ್ ನ ಪರಿಣಾಮ ಹೆಚ್ಚು ಬೀರಿದೆ. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಿತಾದರೂ ಅದಾಗಲೇ ಮಗು ಮೃತಪಟ್ಟಿತ್ತು.
ಬಾಲಕಿ ತಂದೆ ಚಾಮರಾಜನಗರ ತಾಲೂಕಿನ ಕುಮಚಳ್ಳಿ ಆಗಿದ್ದು ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ತಾತನ ಮನೆಗೆ ಬಾಲಕಿಯನ್ನು ಕರೆತರಲಾಗಿತ್ತು. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw