12 ವರ್ಷದ ಬಾಲಕಿ ಗರ್ಭಿಣಿ: ಆತಂಕ, ಭಯದಿಂದ ಮಾಹಿತಿ ನೀಡಲು ಬಾಲಕಿ ಹಿಂದೇಟು
ಚಾಮರಾಜನಗರ: 12 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಕಳವಳಕಾರಿ ಘಟನೆ ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ 12 ವರ್ಷದ ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದು ಸದ್ಯ ಚಾಮರಾಜನಗರದ ಬಾಲಮಂದಿರದಲ್ಲಿ ಸಂತ್ರಸ್ತೆಯನ್ನು ಇರಿಸಲಾಗಿದೆ. ಮೊದಮೊದಲು ಚಿಕ್ಕಪ್ಪನ ಸ್ನೇಹಿತ ಎಂದು ಹೇಳಿದ್ದ ಬಾಲಕಿ ಅದಾದ ಬಳಿಕ ಅಳಲು ಪ್ರಾರಂಭಿಸಿ ಆತಂಕ, ಭಯ, ಒತ್ತಡದಿಂದಾಗಿ ಹೆಚ್ಚೇನೂ ಹೇಳುತ್ತಿಲ್ಲ ಎಂದು ತಿಳಿದುಬಂದಿದೆ.
ಈ ಸಂಬಂಧ ಕುಟುಂಬಸ್ಥರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು ಚಾಮರಾಜನಗರ ಮಹಿಳಾ ಠಾಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ದೂರು ಕೊಟ್ಟಿದ್ದಾರೆ.
ಸಂತ್ರಸ್ಥ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಗುತ್ತಿದೆ. ಗ್ರಾಮದ ಆಶಾ ಕಾರ್ಯಕರ್ತೆಯಿಂದ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka