ಉಡುಪಿ ಜಿಲ್ಲೆಯಲ್ಲಿ ಇಂದು 13 ನಾಮಪತ್ರ ಸಲ್ಲಿಕೆ

udupi
17/04/2023

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ.

118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ , ಭಾರತೀಯ ಜನತಾ ಪಾರ್ಟಿಯ ಗುರುರಾಜ ಶೆಟ್ಟಿ , ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತಾರೆ.

119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅರುಣ್ ದೀಪಕ್ ಮೆಂಡೋನ್ಸಾ , ಭಾರತೀಯ ಜನತಾ ಪಾರ್ಟಿಯ ಕಿರಣ್ ಕುಮಾರ್ ಕೊಡ್ಗಿ ಅವರು 3 ನಾಮಪತ್ರ ಸಲ್ಲಿಸಿದ್ದಾರೆ.

120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಪ್ರಸಾದ ರಾಜ್ ಕಾಂಚನ್, ಪಕ್ಷೇತರ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಅಚಾರ್ಯ ನಾಮಪತ್ರ ಸಲ್ಲಿಸಿದ್ದಾರೆ. 121 ಕಾಪು ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿಯ ಗುರ್ಮೆ ಸುರೇಶ್ ಶೆಟ್ಟಿ 2 ನಾಮಪತ್ರಗಳನ್ನು ಹಾಗೂ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಮೊಹಮದ್ ಹನೀಫ್ ಸೋಷಿಯಲ್ ನಾಮಪತ್ರ ಸಲ್ಲಿಸಿದ್ದಾರೆ.

122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ವಿದ್ಯಾಲಕ್ಷ್ಮಿ 2 ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ 3, ಕುಂದಾಪುರ ವಿಧಾನ ಸಭಾ ಕ್ಷೇತ್ರಕ್ಕೆ 6 , ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ 4, ಕಾಪು ವಿಧಾನ ಸಭಾ ಕ್ಷೇತ್ರಕ್ಕೆ 3, ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 4 ಸೇರಿದಂತೆ ಒಟ್ಟು 20 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version