2:10 PM Friday 11 - September 2026

ಮಂಗಳೂರು: ವಿಷಾಹಾರ ಸೇವಿಸಿ 137 ವಿದ್ಯಾರ್ಥಿಗಳು ಅಸ್ವಸ್ಥ!

mangalore students
07/02/2023

ಮಂಗಳೂರು ನಗರದ ಶಕ್ತಿನಗರದಲ್ಲಿರೋ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ನರ್ಸಿಂಗ್ ಕಾಲೇಜು ಮತ್ತು ಪ್ಯಾರಾಮೆಡಿಕಲ್ ಕಾಲೇಜ್  ಗೆ ಸೇರಿದ ಹಾಸ್ಟೆಲೊಂದರಲ್ಲಿ ವಿಷಾಹಾರ ಸೇವನೆಯಿಂದ  137 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಇವರನ್ನು ಮಂಗಳೂರು ನಗರದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದ್ರಲ್ಲಿ ಎಜೆ ಹಾಸ್ಪಿಟಲ್ ನಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ  18, ಯುನಿಟಿ ಆಸ್ಪತ್ರೆಯಲ್ಲಿ 14, ಸಿಟಿ ಆಸ್ಪತ್ರೆಯಲ್ಲಿ 8, ಮಂಗಳಾ ಹಾಸ್ಪಿಟಲ್ ನಲ್ಲಿ 3, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ 42 ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ.

ಒಟ್ಟು 137 ವಿದ್ಯಾರ್ಥಿಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಈ ವಿದ್ಯಾರ್ಥಿಗಳು ಚಿಕನ್, ಗೀ ರೈಸ್ ತಿಂದಿದ್ದರು ಎನ್ನಲಾಗಿದೆ. ಅಲ್ಲದೇ ಕಳೆದೆರಡು ದಿನದಿಂದ ಕಲುಷಿತ ನೀರು ಮತ್ತು ಆಹಾರ ಸೇವಿಸಿದ ಬಳಿಕ ಆರೋಗ್ಯದ ಸಮಸ್ಯೆ ಕಾಡಿದೆ. ಹೆಚ್ಚಿನವರಿಗೆ ಹೊಟ್ಟೆನೋವು, ವಾಂತಿ ಭೇದಿ, ಲೂಸ್‌ ಮೋಷನ್ ಶುರುವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಸಂಜೆಯ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ.

ಕಾಲೇಜಿನ ಆಡಳಿತ ಮಂಡಳಿಯು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡದ ಕಾರಣ ಇತರ ವಿದ್ಯಾರ್ಥಿನಿಯರು ಮತ್ತು ಪೋಷಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೋಮವಾರ ರಾತ್ರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಡೆಯುತ್ತಿದೆ.

ಇನ್ನು ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡು ಎಜೆ ಆಸ್ಪತ್ರೆಗೆ ದಾಖಲಾಗಿರುವ ಸಿಟಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಲು ಶಾಸಕ ವೇದವ್ಯಾಸ್ ಕಾಮತ್ ಅವರು ಆಸ್ಪತ್ರೆಗೆ ಭೇಟಿ ನೀಡಿದರು. ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಶಾಸಕ ಕಾಮತ್ ಸೂಚನೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version