ಮಧ್ಯಪ್ರದೇಶದ ದಿಂಡೋರಿಯಲ್ಲಿ ಪಿಕ್ ಅಪ್ ವಾಹನ ಪಲ್ಟಿಯಾಗಿ 14 ಸಾವು: 21 ಮಂದಿಗೆ ಗಾಯ

ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. 21 ಜನರು ಗಾಯಗೊಂಡಿದ್ದಾರೆ.
ಜಿಲ್ಲೆಯ ಶಹಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತರು ‘ಗೋಧ್ ಭರೈ’ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ನಂತರ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಶಹಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಘಟನೆಯ ನಂತರ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮೃತರ ಕುಟುಂಬಗಳಿಗೆ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಇದಲ್ಲದೆ, ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ದಿಂಡೋರಿಗೆ ಧಾವಿಸುವಂತೆ ಅವರು ಕ್ಯಾಬಿನೆಟ್ ಸಚಿವ ಸಂಪತಿಯಾ ಉಕೆ ಅವರಿಗೆ ನಿರ್ದೇಶನ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth