ಕಾಡು ಹಂದಿಯ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ

08/03/2024
ಬೀದರ್: ಕಾಡು ಹಂದಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಮೃತರ ಕುಟುಂಬಸ್ಥರಿಗೆ ಸರ್ಕಾರ ಇದೀಗ ಪರಿಹಾರ ವಿತರಿಸಿದೆ.
ಕವಿತಾ(45) ಎಂಬವರು ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಕಾಡು ಹಂದಿ ದಾಳಿ ಮಾಡಿದ್ದು, ಮಹಿಳೆಯ ಹೊಟ್ಟೆಗೆ ಮಾರಣಾಂತಿಕವಾಗಿ ಕಚ್ಚಿ ಗಾಯಗೊಳಿಸಿತ್ತು. ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದರು.
ಘಟನೆ ಸಂಬಂಧ ಮೃತರ ಮನೆಗೆ ಭೇಟಿ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ.
ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/DX0jBN1UDJAJ6ORoqqqFkD