2:29 PM Wednesday 20 - August 2025

15 ವರ್ಷದ ಬಾಲಕನ ಹೃದಯಾಘಾತದಿಂದ ಸಾವು

pritham
11/08/2025

ಕೊಟ್ಟಿಗೆಹಾರ : ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ 15 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ.  ರಸ್ತೆ ಮೇಲೆ ನಡೆದು ಹೋಗುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ ಪ್ರೀತಮ್, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ನಂತರ ಅವರನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವೈದ್ಯರ ಪ್ರಕಾರ, ಸಾವಿಗೆ ಹೃದಯಾಘಾತವೇ ಕಾರಣವಾಗಿದೆ. ಈ ಪ್ರಕರಣ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version