15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ, ಮತ್ತೊಬ್ಬನಿಗಾಗಿ ಶೋಧ

ಬೆಳಗಾವಿ(Belgaum): 15 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ ಹೊರ ವಲಯದ ರೆಸಾರ್ಟ್‌ನಲ್ಲಿ ನಡೆದಿದೆ.
ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಆರೋಪಿಗಳ ಪೈಕಿ ಒಬ್ಬನ ಹೆಸರಿನಲ್ಲಿ ರೆಸಾರ್ಟ್ ರೂಮ್ ಬುಕ್ ಮಾಡಲಾಗಿತ್ತು. ಬಾಲಕಿಯ ಸ್ನೇಹಿತ ಆಕೆಯನ್ನು ರೂಮ್ ಗೆ ಕರೆತಂದಿದ್ದ. ಬಳಿಕ ಮೂವರು ಸೇರಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.
ಮನೆಗೆ ವಾಪಸ್ ಬಂದ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ತೀವ್ರ ಹೊಟ್ಟೆ ನೋವು ಎಂದಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಅತ್ಯಾಚಾರಕ್ಕೊಳಗಾಗಿರುವುದು ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬನ ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD