ಕಿರುಕುಳ ನೀಡಿದ ಯುವಕರನ್ನು ವಿರೋಧಿಸಿದ್ದಕ್ಕೆ ಮನೆಗೆ ನುಗ್ಗಿ 16ರ ಬಾಲಕಿಗೆ ಗುಂಡಿಟ್ಟು ಹತ್ಯೆ
ಫಿರೋಜಾಬಾದ್: ರಸ್ತೆಯಲ್ಲಿ ತನ್ನನ್ನು ಚುಡಾಯಿಸಿದ ಯುವಕರನ್ನು ವಿರೋಧಿಸಿದ್ದಕ್ಕಾಗಿ ಆಕೆಯ ಮನೆಗೆ ನುಗಿ ಗುಂಡಿಟ್ಟು ಹತ್ಯೆ ಮಾಡಿದ ಅಮಾನವೀಯ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ.
ದ್ವಿತೀಯ ಪಿಯುಸಿಯ 16 ವರ್ಷದ ಬಾಲಕಿ ಶುಕ್ರವಾರ ಮಧ್ಯಾಹ್ನ ತನ್ನ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಮೂವರು ಯುವಕರು ಅಸಭ್ಯವಾಗಿ ಕಮೆಂಟ್ ಮಾಡುತ್ತ, ಆಕೆಗೆ ಕಿರುಕುಳ ನೀಡಿದ್ದಾರೆ. ಈ ವೇಳೆ ಯುವತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಳು ಎಂದು ತಿಳಿದು ಬಂದಿದೆ.

ತಮ್ಮ ಕೃತ್ಯಕ್ಕೆ ವಿರೋಧ ವ್ಯಕ್ತಪಡಿಸಿದಳು ಎನ್ನುವ ಕಾರಣಕ್ಕೆ ಶುಕ್ರವಾರ ರಾತ್ರಿ ಬಾಲಕಿ ನಿದ್ದೆ ಮಾಡುತ್ತಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಮೂವರು ಆರೋಪಿಗಳು ಬಾಲಕಿಗೆ ಥಳಿಸಿದ್ದಾರೆ. ಈ ವೇಳೆ ಆಕೆಯ ತಂದೆ, ಕುಟುಂಬದ ಸದಸ್ಯರು ಮಧ್ಯಪ್ರವೇಶಿದ್ದು, ಈ ವೇಳೆ ಆರೋಪಿಗಳು ಬಾಲಕಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸಚೀಂದ್ರ ಪಟೇಲ್ ತಿಳಿಸಿದ್ದಾರೆ.
ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.