ಸ್ನೇಹಿತರ ಜೊತೆ ಕುಳಿತಿದ್ದಾಗಲೇ ಹೃದಯಾಘಾತ: 17 ವರ್ಷದ ವಿದ್ಯಾರ್ಥಿ ಸಾವು

15/01/2025
ಕಲಬುರಗಿ: ಸ್ನೇಹಿತರ ಜೊತೆಗೆ ಕುಳಿತಿದ್ದ 17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ.
ಕೋರೇಶ್ ಸಿದ್ದಣ್ಣ ಮದ್ರಿ(17 ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ನಗರದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೋರೇಶ್, ಗ್ರಾಮದಲ್ಲಿ ತನ್ನ ಸ್ನೇಹಿತರ ಜೊತೆಗೆ ಕುಳಿತಿದ್ದ ವೇಳೆ ಎದೆ ನೋವಿನಿಂದ ಅಸ್ವಸ್ಥನಾಗಿದ್ದಾನೆ.
ತಕ್ಷಣವೇ ಆತನನ್ನು ಗೆಳೆಯ ಬೈಕ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾನೆ. ಆದ್ರೆ ಮಾರ್ಗ ಮಧ್ಯೆ ಕೋರೇಶ್ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ರೋದನೆ ಮುಗಿಲು ಮುಟ್ಟಿದೆ. 17 ವರ್ಷದ ಬಾಲಕ ಹೃದಯಾಘಾತಕ್ಕೊಳಗಾಗಿರುವುದು ಆತಂಕ ಸೃಷ್ಟಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: