5:47 PM Wednesday 22 - October 2025

ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ ಮಾಡುತ್ತಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

r ashok
06/11/2024

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು.

ಅಬಕಾರಿ ಇಲಾಖೆ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ಮದ್ಯದಂಗಡಿ ಮಾಲೀಕರೇ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್​​ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯನವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದಲ್ಲಿ ಪ್ರತಿ ನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಲೂಟಿ ಹೊಡೆಯುತ್ತಿದ್ದಾರೆ. 40 ವರ್ಷದ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ತೆರೆದ ಪುಸ್ತಕ ಎಂದವರು ಲೋಕಾಯುಕ್ತ ವಿಚಾರಣೆಗೆ ಹೋಗಿದ್ದಾರೆ. ಮುಖ್ಯಮಂತ್ರಿ ಆಗಿ ವಿಚಾರಣೆ ಎದುರಿಸುತ್ತಿದ್ದಾರೆ, ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version