ಬಸ್ ಗೆ ಟ್ಯಾಂಕರ್ ಡಿಕ್ಕಿ: 18 ಮಂದಿ ಸಾವು, 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಉನ್ನಾವೊದ ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ವೇನಲ್ಲಿ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಲಿನ ಕಂಟೈನ ರ್ ಗೆ ಡಿಕ್ಕಿ ಹೊಡೆದ ಪರಿಣಾಮ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ.
ಉನ್ನಾವೊದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ಬೆಳಿಗ್ಗೆ 05: 15 ರ ಸುಮಾರಿಗೆ ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ ವೇನಲ್ಲಿ ಹಾಲಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ, ಗಾಯಗೊಂಡ ಎಲ್ಲರನ್ನು ಹೊರತೆಗೆದು ಚಿಕಿತ್ಸೆಗಾಗಿ ಸಿಎಚ್ಸಿ ಬಂಗಾರಮೌಗೆ ದಾಖಲಿಸಿದ್ದಾರೆ ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಬೆಹತಮುಜಾವರ್ ಪೊಲೀಸರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth