ನಕ್ಸಲ್ ನಿಗ್ರಹ ಕಾರ್ಯಾಚರಣೆ: ಉನ್ನತ ಕಮಾಂಡರ್ ಸೇರಿದಂತೆ 18 ಮಂದಿ ನಕ್ಸಲರ ಹತ್ಯೆ

ನವದೆಹಲಿ: ಛತ್ತೀಸ್ ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಪ್ರಮುಖ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಉನ್ನತ ಕಮಾಂಡರ್ ಸೇರಿದಂತೆ ಕನಿಷ್ಠ 18 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಛತ್ತೀಸ್ ಗಢ ಪೊಲೀಸರ ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್ಎಫ್) ಜಂಟಿಯಾಗಿ ನಡೆಸಿದ ಈ ಕಾರ್ಯಾಚರಣೆಯು ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ನಡೆಯಿತು.
ಬಿನಗುಂದ ಪ್ರದೇಶದಲ್ಲಿ ಮಾವೋವಾದಿ ಬಂಡುಕೋರರ ಉಪಸ್ಥಿತಿಯನ್ನು ಸೂಚಿಸುವ ನಿರ್ದಿಷ್ಟ ಗುಪ್ತಚರ ಮಾಹಿತಿಗಳನ್ನು ಪಡೆದ ನಂತರ ಕಾರ್ಯಾಚರಣೆಯನ್ನು ನಿಖರವಾಗಿ ಯೋಜಿಸಲಾಗಿತ್ತು. ಬಿಎಸ್ಎಫ್, ಜಿಲ್ಲಾ ರಿಸರ್ವ್ ಗಾರ್ಡ್ ಸಹಯೋಗದೊಂದಿಗೆ ಬಂಡಾಯವನ್ನು ಬೇರುಸಹಿತ ಕಿತ್ತೊಗೆಯಲು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth