ಕಲುಷಿತ ನೀರು ಸೇವಿಸಿ 6 ಮಕ್ಕಳ ಸಹಿತ 18 ಮಂದಿ ಅಸ್ವಸ್ಥ

water
20/06/2023

ಬೀದರ್: ಕಲುಷಿತ ನೀರು ಸೇವಿಸಿದ ಪರಿಣಾಮ 18 ಜನರು ಅಸ್ವಸ್ಥಗೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ನಡೆದಿದೆ.

ಕುಡಿಯುವ ನೀರಿನ ಬಾವಿಗೆ ಚರಂಡಿ ನೀರು ಸೇರಿದ್ದು, ಇದರಿಂದಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ.

ಕಲುಷಿತ ನೀರು ಸೇವಿಸಿ  ಅಸ್ವಸ್ಥರಾದವರ ಪೈಕಿ 6 ಮಂದಿ ಮಕ್ಕಳಿದ್ದು, ಇವರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ನಡೆದ ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version