ಶಾಲೆ ಆರಂಭವಾಗುತ್ತಿದ್ದಂತೆಯೇ 18 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ - Mahanayaka

ಶಾಲೆ ಆರಂಭವಾಗುತ್ತಿದ್ದಂತೆಯೇ 18 ಶಿಕ್ಷಕರಿಗೆ ಕೊರೊನಾ ಪಾಸಿಟಿವ್

05/01/2021

ಬೆಂಗಳೂರು: ಶಾಲೆ ಆರಂಭವಾಗುತ್ತಿದ್ದಂತೆಯೇ ಶಿಕ್ಷಕರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು,  18 ಶಿಕ್ಷಕರಿಗೆ ಕೊರೊನಾ ಪಾಸಿಟಿವ್  ಬಂದಿದೆ. ಶಾಲೆ ಆರಂಭವಾಗುವುದಕ್ಕೂ ಮೊದಲು ನಡೆಸಿದ ಪರೀಕ್ಷೆಯ ವರದಿ ಇದೀಗ ಬಂದಿದೆ ಎಂದು ತಿಳಿದು ಬಂದಿದೆ.

ಜಿಲ್ಲೆಯಲ್ಲಿ ಈವರೆಗೆ 5,150 ಶಿಕ್ಷಕರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 2 ಸಾವಿರ ಶಿಕ್ಷಕರಿಗೆ ನೆಗೆಟಿವ್ ವರದಿ ಬಂದಿದೆ. ಇನ್ನುಳಿದ ಶಿಕ್ಷಕರ ವರದಿ ಇನ್ನಷ್ಟೆ ಬರಬೇಕಿದೆ.

ತಾಲೂಕಿನ ಕಡೋಲಿ ಗ್ರಾಮದ  ಸರ್ಕಾರಿ ಶಿಕ್ಷಕರೊಬ್ಬರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇಂದಿನಿಂದ ಶಾಲೆಯನ್ನು ಬಂದ್ ಮಾಡಲಾಗಿದೆ. ಶಿಕ್ಷಕರ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಶಿಕ್ಷಕರ ಪರೀಕ್ಷಾ ವರದಿ ಬರುವವರೆಗೂ ಶಾಲೆ ಬಂದ್ ಮಾಡಲು ನಿರ್ಧರಿಸಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.  ಕೊಪ್ಪಳ ಜಿಲ್ಲೆಯ ವದಗನಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಗೆ ಕೊರೊನಾ ದೃಢಪಟ್ಟಿದೆ.  ಇನ್ನೂಉತ್ತರಕನ್ನಡ ಜಿಲ್ಲೆಯಲ್ಲಿ  ಪ್ರೌಢ ಶಾಲೆಯ ಐವರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದ್ದು,  ಹೊನ್ನಾವರದಲ್ಲಿ ಇಬ್ಬರು, ಭಟ್ಕಳದಲ್ಲಿ ಒಬ್ಬರಿಗೆ ಹಾಗೂ ಶಿರಸಿಯಲ್ಲಿ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ