ಉಪವಾಸ ಅಂತ್ಯದ ಬಳಿಕ ಪಾನಿಪುರಿ ಸೇವಿಸಿದ 19 ಮಕ್ಕಳು ಅಸ್ವಸ್ಥ: ನಾಲ್ವರ ಸ್ಥಿತಿ ಚಿಂತಾಜನಕ

ದಾವಣಗೆರೆ: ಉಪವಾಸ ಅಂತ್ಯಗೊಳಿಸಿದ ನಂತರ ಮಸೀದಿ ಮುಂಭಾಗ ಮಾರಾಟ ಮಾಡುತ್ತಿದ್ದ ಪಾನಿಪುರಿ ಸೇವಿಸಿದ 19 ಮಕ್ಕಳು ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಮಲೆಬೆನ್ನೂರಿನ ಜಾಮೀಯಾ ಮಸೀದಿ ಬಳಿ ಈ ಘಟನೆ ನಡೆದಿದೆ. ಉಪವಾಸ ಆಚರಿಸುತ್ತಿದ್ದ ಮಕ್ಕಳು ಉಪವಾಸ ಅಂತ್ಯ ಮಾಡಿದ ಬಳಿಕ ಮಸೀದಿ ಮುಂಭಾಗದಲ್ಲಿ ಮಾರಾಟ ಮಾಡುತ್ತಿದ್ದ ಪಾನಿಪುರಿ ಸೇವಿಸಿದ್ದಾರೆ. ಬಳಿಕ ಕೆಲವೇ ಹೊತ್ತಿನಲ್ಲಿ ಮಕ್ಕಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ.
ಇದರಿಂದ ಆತಂಕಗೊಂಡ ಮಕ್ಕಳ ಪೋಷಕರು ತಕ್ಷಣವೇ ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವರದಿಗಳ ಪ್ರಕಾರ ಅಸ್ವಸ್ಥಗೊಂಡ ಮಕ್ಕಳ ಪೈಕಿ ನಾಲ್ವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಇವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth