1:20 PM Thursday 16 - October 2025

19 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ

sanaa
29/05/2022

ಉತ್ತರ ಕನ್ನಡ: ಜ್ವರ ದಿಂದ ದಾಖಲಾಗಿದ್ದ ನವ ವಿವಾಹಿತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಸನಾ ಮಾಂಜ್ರೇಕರ್ (24) ಮೃತಪಟ್ಟವರಾಗಿದ್ದು, ಸ್ವಪ್ನಿಲ್ ಎಂಬವರ ಜೊತೆ 19 ದಿನಗಳ ಹಿಂದಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ಸನಾ ಮಾಂಜ್ರೇಕರ್ ಅವರಿಗೆ 8 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ನಿನ್ನೆ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕಾರವಾರ ನಗರದ ಕಾಜುಭಾಗ್ ನ ಸಾವಂತ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಈ ವೇಳೆ ಸನಾ ಅವರಿಗೆ ಆಸ್ಪತ್ರೆಯ ಸಿಬ್ಬಂದಿ ನಾಲ್ಕು ಇಂಜೆಕ್ಷನ್ಗಳನ್ನು ನೀಡಿದ್ದು, ಇದರಿಂದ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಕೂಡಲೇ ಆಂಬುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಸನಾ ಸಾವನ್ನಪ್ಪಿದ್ದಾರೆ.

ಸನಾ ಅವರ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತಳ ಸಂಬಂಧಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಮೃತಳ ಸಂಬಂಧಿಕರು ಕಾರವಾರ ನಗರ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಸನಾ ಸಾವಿಗೆ ನ್ಯಾಯಕೊಡಿಸುವಂತೆ ಆಗ್ರಹಿಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ 7 ಮಂದಿ ಅಪಘಾತಕ್ಕೆ ಬಲಿ

ಕಾಂಗ್ರೆಸ್ ಪಕ್ಷ ತೊರೆದ ನಟ ಮುಖ್ಯಮಂತ್ರಿ ಚಂದ್ರು: ಕಾರಣ ಏನು?

ಮಹಿಳೆಯರು ರಾತ್ರಿ ಪಾಳಿಯಲ್ಲಿ  ಕೆಲಸ ಮಾಡುವಂತಿಲ್ಲ: ಯೋಗಿ ಸರ್ಕಾರದಿಂದ ಖಡಕ್ ಆದೇಶ

ಪೊಲೀಸರ ರೈಫಲ್‌ ಗಳ ಬಿಗಿ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಪ್ರವೇಶಿಸಿದ ದಲಿತ ಮಹಿಳೆಯರು!

ಇತ್ತೀಚಿನ ಸುದ್ದಿ

Exit mobile version