1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆ ಪ್ರಾರಂಭ ಯಾವಾಗ? | ಶಿಕ್ಷಣ ಸಚಿವರು ನೀಡಿದ ಮಾಹಿತಿ ಏನು? - Mahanayaka
11:25 AM Wednesday 17 - December 2025

1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆ ಪ್ರಾರಂಭ ಯಾವಾಗ? | ಶಿಕ್ಷಣ ಸಚಿವರು ನೀಡಿದ ಮಾಹಿತಿ ಏನು?

06/02/2021

ಬೆಂಗಳೂರು: ಒಂದರಿಂದ 8ನೇ ತರಗತಿಯವರೆಗೆ ಶೀಘ್ರವೇ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಗೌರಿಬಿದನೂರು ತಾಲ್ಲೂಕಿನ ನಗರಗೆರೆ ಹೋಬಳಿ ನಂಜಯ್ಯಗಾರಿಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಕುರಿತು ಫೆಬ್ರವರಿ 2ನೇ ವಾರ ಇಲ್ಲವೇ 3 ನೇ ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಳಲಾಗುತ್ತದೆ ಎಂದು ಹೇಳಿದರು.

9, 10 ಹಾಗೂ ಪಿಯುಸಿ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿದ್ದು, ಶೇಕಡ 80 ರಷ್ಟು ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಆರರಿಂದ ಎಂಟನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಲಿಕೆ ಮುಂದುವರೆದಿದೆ ಎಂದ ಅವರು, ಆರೋಗ್ಯ ಇಲಾಖೆ ಮತ್ತು ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಲ್ಲಿ ಚರ್ಚಿಸಿ 1ರಿಂದ 8ನೇ ತರಗತಿವರೆಗೆ ತರಗತಿ ಪ್ರಾರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ