1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ - Mahanayaka
6:54 PM Wednesday 21 - January 2026

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

karnataka school
28/03/2021

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕಲಿಯುತ್ತಿರುವ 1ರಿಂದ 9ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ತರಗತಿಗೆ ಉತ್ತೀರ್ಭ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು,  ಶಿಕ್ಷಣ ಸಚಿವರು, ಗೃಹ ಸಚಿವರು ಹಾಗೂ ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಧಿಕೃತವಾಗಿ ಮಾಹಿತಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ಆತಂಕಾರಿಯಾಗುವ ಮಟ್ಟದಲ್ಲಿ ಹರಡುತ್ತಿದೆ. ಇದು ರೂಪಾಂತರಿ ಸೋಂಕು ಎಂಬುದು ನಿಶ್ಚಿತ. ಸದ್ಯಕ್ಕೆ ಇದರ ಹರಡುವ ವೇಗ ಹೆಚ್ಚಿದೆ. ಸಾವಿನ ಪ್ರಮಾಣ ಕಡಿಮೆ ಇದೆ. ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಇತ್ತೀಚಿನ ಸುದ್ದಿ