11:13 AM Saturday 15 - August 2026

ಬಿಗ್ ಬ್ರೇಕಿಂಗ್ ನ್ಯೂಸ್:  1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್

exam
20/04/2021

ಬೆಂಗಳೂರು: ಕೊರೊನಾ ಸೋಂಕು ಮಿತಿ ಮೀರಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.

1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 1-9ನೇ ತರಗತಿವರೆಗೆ ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕಳೆದ ಹಲವು ಸಮಯಗಳಿಂದಲೂ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದೇ? ಬೇಡವೇ ಎಂಬ ಬಗ್ಗೆ ಚರ್ಚೆಯಾಗುತ್ತಲೇ ಇತ್ತು. ಹಲವು ಗೊಂದಲಕಾರಿ ಹೇಳಿಕೆಗಳು, ನಡೆಗಳ ಬಳಿಕ ಇದೀಗ ಶಿಕ್ಷಣ ಇಲಾಖೆ ಕೊನೆಗೂ ಅಂತಿಮ ನಿರ್ಧಾರ ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

Exit mobile version