ಧರ್ಮಸ್ಥಳ—ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ವೈದ್ಯಾಧಿಕಾರಿಯ 2.50 ಲಕ್ಷ ಹಣ ಜಪ್ತಿ - Mahanayaka
8:01 PM Thursday 4 - September 2025

ಧರ್ಮಸ್ಥಳ—ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ವೈದ್ಯಾಧಿಕಾರಿಯ 2.50 ಲಕ್ಷ ಹಣ ಜಪ್ತಿ

koti
31/03/2023


Provided by

ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ 2.50 ಲಕ್ಷ ಹಣ ಪತ್ತೆಯಾದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

ಧರ್ಮಸ್ಥಳ—ಕಟೀಲು ದೇವಸ್ಥಾನದ ಹುಂಡಿಗೆ ಹಾಕಲು ತಂದಿದ್ದ 2.50 ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತುಮಕೂರಿನ ಪಾವಗಡ ತಾಲೂಕು ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಪಾವಗಡ ಮೂಲದ ವೈದ್ಯಾಧಿಕಾರಿ ಫಾರ್ಚುನರ್ ವಾಹನದಲ್ಲಿ ಬಂದಿದ್ದರು. ಪೊಲೀಸರು ಪರಿಶೀಲನೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ.

ಚುನಾವಣೆ ಹಿನ್ನೆಲೆಯಲ್ಲಿ ಕೇವಲ 50 ಸಾವಿರ ಹಣ ಮಾತ್ರವೇ ಸಾಗಿಸಲು ಅವಕಾಶವಿದೆ. ೀ ಹಿನ್ನೆಲೆಯಲ್ಲಿ 2.50 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪತ್ತೆಯಾಗಿರುವ ಹಣಕ್ಕೆ ಯಾವುದೇ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಹಣ ಜಪ್ತಿ ಮಾಡಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ