4:43 AM Wednesday 22 - October 2025

ಪುಣೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ರು ಇಬ್ಬರು: ಆರೋಪಿಗಳು ಅಂದರ್

16/08/2023

ಪುಣೆಯ ಕೊಂಡ್ವಾ ಪ್ರದೇಶದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇಬ್ಬರು ವ್ಯಕ್ತಿಗಳು “ಪಾಕಿಸ್ತಾನ್ ಜಿಂದಾಬಾದ್” ಎಂದು ಕೂಗುತ್ತಿದ್ದಾರೆ ಎಂದು ಕೆಲವು ಸ್ಥಳೀಯರಿಂದ ನಮಗೆ ದೂರು ಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತರನ್ನು ಅಕ್ಬರ್ ನದಾಫ್ ಮತ್ತು ತೌಕೀರ್ ಎಂದು ಗುರುತಿಸಲಾಗಿದೆ. ಇವರಲ್ಲಿ ಓರ್ವ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ರೆ ಇನ್ನೊಬ್ಬ ಒಬ್ಬರು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version