ಅಂಬಾನಿ ಪುತ್ರನ ಮದ್ವೆಗೆ ಆಹ್ವಾನವಿಲ್ಲದೇ ಪ್ರವೇಶ: ಯೂಟ್ಯೂಬರ್ ಸೇರಿ ಇಬ್ಬರ ಬಂಧನ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ಅಡ್ಡಿಪಡಿಸಲು ಯತ್ನಿಸಿದ ಇಬ್ಬರನ್ನು ಮುಂಬೈನಲ್ಲಿ ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ಆಹ್ವಾನವಿಲ್ಲದೆ ಮದುವೆ ಸಮಾರಂಭಕ್ಕೆ ಪ್ರವೇಶಿಸಲು ಪ್ರಯತ್ನಿಸಿದ ವ್ಯಕ್ತಿಗಳಲ್ಲಿ ಓರ್ವ ಯೂಟ್ಯೂಬರ್ ವೆಂಕಟೇಶ್ ನರಸಯ್ಯ (26) ಮತ್ತು ಇನ್ನೊಬ್ಬ ವ್ಯಕ್ತಿ ಲುಕಮ್ ಮೊಹಮ್ಮದ್ ಶಫಿ ಶೇಖ್ (28) ಎಂದು ಗುರುತಿಸಲಾಗಿದೆ.
ಗಾಲಾ ಕಾರ್ಯಕ್ರಮ ನೋಡಲು ಇವರಿಬ್ಬರು ಆಂಧ್ರಪ್ರದೇಶದಿಂದ ಮುಂಬೈಗೆ ಬಂದಿದ್ದರು. ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ವೆಂಕಟೇಶ್ ಮತ್ತು ಲುಕಮ್ ಇಬ್ಬರೂ ಮದುವೆ ಕಾರ್ಯಕ್ರಮ ನಡೆದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ಗೆ ಆಗಮಿಸಿದ್ದರು. ಅನುಮಾನದ ಆಧಾರದ ಮೇಲೆ, ಭದ್ರತಾ ಅಧಿಕಾರಿಗಳು ಅವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರನ್ನು ಬಿಕೆಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರ ವಿರುದ್ಧ
ಪ್ರಕರಣ ದಾಖಲಿಸಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೋಟಿಸ್ ನೀಡಿದಲ್ಲದೇ ಎರಡೂ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಂಡ ನಂತರ ಪೊಲೀಸರು ಇವರಿಬ್ಬರನ್ನು ಬಿಡುಗಡೆ ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth